ರಾಜ್ಯದಲ್ಲಿ ಬೇಸಿಗೆಯ ಮಳೆ ಮುಂದುವರೆದಿದ್ದು ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗದಲ್ಲಿ ಮಿಂಚು – ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯನಗರ ಹಾಗೂ ಗದಗನಲ್ಲೂ ಮಳೆ ಇರಲಿದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಾಮರಾಜನಗರ, ಮಂಡ್ಯ ಹಾಗೂ ಮೈಸೂರಿನಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಆದರೆ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಅಲರ್ಟ್ ನೀಡಿದೆ.