ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರೊಂದಿಗೆ ಕೆಲವು ಭಾಗಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಗಂಟೆಗೆ 50 KM ವೇಗದಲ್ಲಿ ಬಿರುಗಾಳಿ ಬೀಸಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಮುನ್ಸೂಚನೆ ಇದೆ.




