ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಅವರು ಡಿಸೆಂಬರ್ 1ರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
1986ರ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ರಜನೀಶ್ ಈಗ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನ.30ಕ್ಕೆ ನಿವೃತ್ತರಾಗಲಿರುವ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಸ್ಥಾನಕ್ಕೆ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.