ಬೆಂಗಳೂರು: ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಸಮಾಜ ಸೇವಕರು ಸೇರಿದಂತೆ 68 ಸಾಧಕರಿಗೆ 2023-24ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ.
ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು, ಚಾರ್ಮಾಡಿ ಹಸನಬ್ಬ, ಹಾಜಿ ಅಬ್ದುಲ್ಲ ಪರ್ಕಳ, ಕೆ.ಷರೀಫಾ, ಹುಸೇನಾಬಿ ಬುಡೇನ್ ಸಾಬ್ ಸಿದ್ದಿ, ಸೇರಿದಂತೆ ಹಲವರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 68 ಸಾಧಕರು ಹಾಗೂ 10 ಸಂಸ್ಥೆಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ.