‘777 ಚಾರ್ಲಿ’ ಸಿನಿಮಾದ ನಂತರ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಮೂಲಕ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ. ಈ ಸಿನಿಮಾವನ್ನು ಎರಡು ಪಾರ್ಟ್‌ಗಳಲ್ಲಿ ತೆರೆಗೆ ತರಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದ್ದು, ಆಗಲೇ ರಿಲೀಸ್ ಡೇಟ್ ಕೂಡ ಘೋಷಣೆ ಆಗಿದೆ. ಸದ್ಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಎರಡನೇ ಹಾಡನ್ನು ಚಿತ್ರತಂಡ ರಿಲೀಸ್ ಮಾಡಿದ್ದು, ಸಿನಿಮಾದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.
‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಮತ್ತು ನಿರ್ದೇಶಕ ಹೇಮಂತ್ ಎಂ ರಾವ್ ಕಾಂಬಿನೇಷನ್‌ನ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವು ದಿನದಿಂದ ದಿನಕ್ಕೆ ನಿರೀಕ್ಷೆಯನ್ನು ಹೆಚ್ಚಿಸುತ್ತಿದೆ. ಈಚೆಗಷ್ಟೇ ‘ಹೋರಾಟ..’ ಎಂಬ ಹಾಡನ್ನು ಚಿತ್ರತಂಡ ರಿಲೀಸ್ ಮಾಡಿ, ಸದ್ದು ಮಾಡಿತ್ತು. ಈಗ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಎರಡನೇ ಹಾಡು ರಿಲೀಸ್ ಆಗಿದೆ. ಇದು ಈ ಚಿತ್ರದ ಟೈಟಲ್ ಟ್ರ್ಯಾಕ್ ಎಂಬುದು ವಿಶೇಷ. ಮೆಲೋಡಿ ಆಗಿರುವ ಈ ಹಾಡು ಕೇಳುಗರ ಮನಸ್ಸನ್ನು ಗೆಲ್ಲುತ್ತಿದೆ.