ರತನ್ ಟಾಟಾ ಅರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Share with

ಮುಂಬೈ: ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಟಾಟಾ ಅವರನ್ನು ಕಳೆದ ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆಸ್ಪತ್ರೆಯ ಹಿರಿಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಸೋಮವಾರ ಆಸ್ಪತ್ರೆಗೆ ದಾಖಲಾದ ಕುರಿತು ಸ್ವತಃ ರತನ್ ಟಾಟಾ ಅವರೇ ಮಾಹಿತಿ ಹಂಚಿಕೊಂಡಿದ್ದು ಎಂದಿನಂತೆ ಅರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ, ಸಾರ್ವಜನಿಕರು ತಪ್ಪು ತಿಳಿದುಕೊಳ್ಳಬೇಡಿ ಆತಂಕ ಪಡುವ ಯಾವುದೇ ವಿಚಾರ ಇಲ್ಲ, ಸಾರ್ವಜನಿಕರು ಮತ್ತು ಮಾಧ್ಯಮಗಳು ತಪ್ಪು ಮಾಹಿತಿ ಹರಡಿಸದಂತೆ ವಿನಂತಿಸಿದ್ದರು. ಆದರೆ ಇದೀಗ ಟಾಟಾ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.


Share with

Leave a Reply

Your email address will not be published. Required fields are marked *