
ಮುಂಬೈ: ಮುಂಬೈ ಭದ್ರಕೋಟೆ ವಾಂಖೆಡೆ ಕ್ರೀಡಾಂಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ವಾಂಖೆಡೆ ಕ್ರೀಡಾಂಗಣದಲ್ಲಿ ಆರ್‌ಸಿಬಿ 10 ವರ್ಷಗಳ ಬಳಿಕ ಗೆಲುವು ಸಾಧಿಸಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಂದು ನಡೆದ ಪಂದ್ಯವು ಕೊನೆಯವರೆಗೂ ರೋಚಕವಾಗಿತ್ತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 5 ವಿಕೆಟ್ ನಷ್ಟಕ್ಕೆ 221 ರನ್ ಬಾರಿಸಿತ್ತು. 222 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿ ಸೋಲೊಪ್ಪಿಕೊಂಡಿತು.