ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ಒಟ್ಟು 8 ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕ & ಸಮಾನಾಂತರ ಒಟ್ಟು 325 ಹುದ್ದೆಗಳ ನೇಮಕಾತಿಗೆ ಜ. 25ರಂದು KEA ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ.

ಜ. 25 ರಂದು ರಾಜ್ಯದ 12 ಜಿಲ್ಲೆಗಳ ಒಟ್ಟು 319 ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು 1,33,346 ಮಂದಿ ಬರೆಯುತ್ತಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.




