ಕೃಷಿ ಇಲಾಖೆಯ ಗ್ರೂಪ್ ಬಿ ಮತ್ತು ಸಿ ವೃಂದದ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ವೃಂದದ 945 ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಕೃಷಿ ಇಲಾಖೆಯಲ್ಲಿ ಕೊನೆಯದಾಗಿ 2018ರಲ್ಲಿ 370 ಹುದ್ದೆಗಳಿಗೆ ನೇಮಕಾತಿ ನಡೆದಿದೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕ ಲೋಕಸೇವಾ ಆಯೋಗದಿಂದ ನೇರ ನೇಮಕಾತಿ ಮೂಲಕ 945 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು ಎಂದು ಸಚಿವರು ತಿಳಿಸಿದ್ದಾರೆ.




