ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶುಶೂಷಕಿಯರ ಬಗ್ಗೆ ಅವಹೇಳನಾಕಾರಿ ರೀಲ್ಸ್ ಮಾಡಿದ್ದ ಹಿನ್ನೆಲೆಯಲ್ಲಿ ಮಹಾ ವೈದ್ಯಕೀಯ ಕಾಲೇಜಿನ 11 ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು 1 ವಾರ ಕಾಲ ಅಮಾನತು ಮಾಡಿ ಆದೇಶಿಸಿದ್ದಾರೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ನಸ್‌ರ್ಗಳು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು. ಘಟನೆ ಬಳಿಕ ವಿದ್ಯಾರ್ಥಿಗಳು ನಸ್‌ರ್ಗಳ ಬಳಿ ಕ್ಷಮೆ ಕೂಡ ಯಾಚಿಸಿದ್ದಾರೆ ಎನ್ನಲಾಗಿದೆ.