ಉತ್ತರಪ್ರದೇಶ: ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ರೈಲ್ವೆ ಹಳಿ ಮೇಲೆ ಮಲಗಿ ರೀಲ್ಸ್ ಮಾಡಲು ಮುಂದಾದ ಸಂದರ್ಭದಲ್ಲಿ ಏಕಾಏಕಿ ರೈಲು ಡಿಕ್ಕಿ ಹೊಡೆದು ಬಾಲಕ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.
ಈ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈತ ಸಾಯುವ ಕೊನೆಯ ಕ್ಷಣದ ದೃಶ್ಯ ವಿಡಿಯೊದಲ್ಲಿ ದಾಖಲಾಗಿದೆ. 14 ವರ್ಷದ ಫಾರ್ಮನ್ ಎಂಬ ಬಾಲಕ ರೀಲ್ಸ್ ಮಾಡಲು ರೈಲ್ವೆ ಹಳಿ ಮೇಲೆ ಕಾಲಿಡುತ್ತಿದ್ದಂತೆಯೇ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿತ್ತು. ಇದರ ಪರಿಣಾಮ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಫಾರ್ಮನ್ ಗೆಳೆಯ ಈ ಸಂದರ್ಭದಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದು, ಏಕಾಏಕಿ ಸಂಭವಿಸಿದ ಘಟನೆಯಿಂದ ಆತ ಆಘಾತಕ್ಕೊಳಗಾಗಿರುವುದಾಗಿ ವರದಿಯಾಗಿದೆ.