ಬ್ರಹ್ಮಶ್ರೀ ನಾರಾಯಣಗುರು ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರ ಬಿಡುಗಡೆ

Share with

ಬಂಟ್ವಾಳ: ನೀರಪಾದೆಯ ಬಾಳ್ತಿಲದಲ್ಲಿ ಜೀರ್ಣೋದ್ಧಾರಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರವನ್ನು ಸಾರ್ವಜನಿಕ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ನಡೆದ ಗಣೇಶೋತ್ಸವ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅವರು ಬಿಡುಗಡೆಗೊಳಿಸಿದರು.

ಟ್ರಸ್ಟ್ ಹಾಗೂ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ನಾರಾಯಣ ಪೂಜಾರಿ, ಟ್ರಸ್ಟಿನ ಕಾರ್ಯದರ್ಶಿ ಪಿ.ಎಸ್ ಮೋಹನ್, ಮಾಜಿ  ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ, ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಶಿವರಾಜ್ ಕಾಂದಿಲ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *