ಮುಂಬೈ: ರಿಲಯನ್ಸ್ ಕಂಪನಿಯ ಆಡಳಿತ ಮಂಡಳಿಯಲ್ಲಿ ತಮ್ಮ ಮೂವರು ಪುತ್ರರಿಗೆ ಉದ್ಯಮಿ ಮುಖೇಶ್ ಅಂಬಾನಿ ಸ್ಥಾನ ನೀಡುವ ಮೂಲಕ ಅಧಿಕಾರ ಹಸ್ತಾಂತರಕ್ಕೆ ಮುಂದಾಗಿದ್ದಾರೆ. ರಿಲಯನ್ಸ್ ಇಂಡಸ್ಟ್ರಿ ಲಿಮಿಟೆಡ್ ಬೋರ್ಡ್ 46ನೇ ಸಾಮಾನ್ಯ ವಾರ್ಷಿಕ ಸಭೆಯಲ್ಲಿ ಮಹತ್ವದ ನಿರ್ಧಾರಗಳು ಹೊರಬಿದ್ದಿದೆ.
ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಮಕ್ಕಳಾದ ಇಶಾ ಅಂಬಾನಿ, ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರನ್ನು ಕಂಪೆನಿಯ ಕಾರ್ಯ ನಿರ್ವಾಹಕಯೇತರ (ನಾನ್ ಎಕ್ಸಿಕ್ಯೂಟಿವ್) ನಿರ್ದೇಶಕರನ್ನಾಗಿ ನೇಮಿಸಲು ಸೋಮವಾರ ನಡೆದ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ನಿರ್ದೇಶಕರ ಮಂಡಳಿ ಶಿಫಾರಸು ಮಾಡಿದೆ.
ನೀತಾ ಅಂಬಾನಿ ರಾಜೀನಾಮೆಯನ್ನು ರಿಲಯನ್ಸ್ ಇಂಡಸ್ಟ್ರೀ ಸ್ವೀಕರಿಸಿದೆ. ನೀತಾ ಅಂಬಾನಿ ರಿಲಯನ್ಸ್ ಇಂಡಸ್ಟ್ರಿ ಲಿಮಿಟೆಡ್ ಬೋರ್ಡ್ ಸಮಿತಿಗೆ ಮಾತ್ರ ರಾಜೀನಾಮೆ ನೀಡಿದ್ದಾರೆ. ರಿಲಯನ್ಸ್ ಫೌಂಡೇಶನ್‌ನ ಮುಖ್ಯಸ್ಥೆಯಾಗಿ ನೀತಾ ಅಂಬಾನಿ ಮುಂದುವರಿಯಲಿದ್ದಾರೆ ಎಂದು ರಿಲಯನ್ಸ್ ಸ್ಪಷ್ಟಪಡಿಸಿದೆ.