ನವದಹೆಲಿ: ಭಾರತೀಯ ಚಲನಚಿತ್ರ ಹಾಗೂ ದೂರದರ್ಶನ ಮಂಡಳಿಯ (ಎಫ್ ಟಿಐಐ) ನೂತನ ಅಧ್ಯಕ್ಷರಾಗಿ ಖ್ಯಾತ ನಟ ಆರ್.ಮಾಧವನ್ ನೇಮಕಗೊಂಡಿದ್ದಾರೆ.
ಭಾರತದ ಪ್ರಮುಖ ಸಿನಿಮಾ, ಟಿವಿ ಶಿಕ್ಷಣ ಸಂಸ್ಥೆಯಾದ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಫ್ಟಿಐಐ) ಗೆ ತಮಿಳಿನ ಜನಪ್ರಿಯ ನಟ, ನಿರ್ದೇಶಕ ಆರ್ ಮಾಧವನ್ ಅವರನ್ನು ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.
ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಎಫ್ ಟಿಐಐನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಚೇರ್‌ಮನ್ ಆಗಿರುವ ಮಾಧವನ್ ಅವರಿಗೆ ಅಭಿನಂದನೆಗಳು. ನಿಮ್ಮ ಅಪಾರ ಅನುಭವ ಹಾಗೂ ಬಲವಾದ ನೈತಿಕತೆ ಈ ಸಂಸ್ಥೆಯನ್ನು ಮುನ್ನಡೆಸುತ್ತದೆ ಎಂದು ಹೇಳಿದ್ದಾರೆ.
ಮಾಧವನ್ ನಟಿಸಿ, ನಿರ್ದೇಶನ ಮಾಡಿದ್ದ ʻರಾಕೆಟ್ರಿ – ದಿ ನಂಬಿ ಎಫೆಕ್ಟ್ʼ ಚಿತ್ರ ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು.