ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ನಿಧನ

Share with

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ಹೃದಯಾಘಾತದಿಂದ ಇಂದು (ಜೂ.22) ನಿಧನರಾಗಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.
ಕಮಲಾ ಹಂಪನಾ ಅವರು ಕನ್ನಡದ ಲೇಖಕಿ ಹಾಗೂ ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಶ್ರಮಿಸಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ.
ಸಾಹಿತ್ಯ ಕೃತಿಗಳು ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ ಸೇರಿದಂತೆ ಹಲವು ಸಾಹಿತ್ಯಗಳನ್ನು ರಚಿಸಿದ್ದಾರೆ. 2003 ಡಿಸೆಂಬರ್ ತಿಂಗಳಲ್ಲಿ ಮೂಡುಬಿದಿರೆಯಲ್ಲಿ ಜರುಗಿದ 71 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಮಲಾ ಹಂಪನಾ ಅಧ್ಯಕ್ಷರಾಗಿದ್ದರು.


Share with

Leave a Reply

Your email address will not be published. Required fields are marked *