
ಬಂಟ್ವಾಳ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಂಡಾಲ ಇಲ್ಲಿ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜನಾರ್ಧನ್ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ಬಳಿಕ ಮಕ್ಕಳು ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ಭಾಷಣ ಮಾಡಿದರು, ಸಂವಿಧಾನ ಪೀಠಿಕೆಯನ್ನು ಓದಲಾಯಿತು ಹಾಗೂ ಸಂವಿಧಾನ ಪೀಠಿಕೆಯ ಹಾಡಿಗೆ ಮಕ್ಕಳು ನೃತ್ಯ ಮಾಡಿದರು
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಜಯರಾಮ್ ಗುಂಡೂರು, ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಹಿರಿಯ ವಿದ್ಯಾರ್ಥಿಗಳು ಊರ ಮಹನೀಯರು ಶಿಕ್ಷಕ ವೃಂದ ಹಾಗೂ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರೀಯ ಹಬ್ಬಕ್ಕೆ ಇನ್ನಷ್ಟು ಮೆರುಗು ನೀಡಿದರು.