ಪಹಲ್ಗಾಮ್‌ ದಾಳಿಗೆ ಪ್ರತೀಕಾರ; ಇಬ್ಬರು ಪಾಕ್‌ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!

Share with

ಜಮ್ಮು ಮತ್ತು ಕಾಶ್ಮೀರದಲ್ಲಿ ಗುಂಡಿನ ಚಕಮಕಿಯ ನಂತರ ಭಾರತೀಯ ಸೇನೆಯ ಯೋಧರು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ.ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿ, ಇಬ್ಬರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ.

ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದೆ. ಭಯೋತ್ಪಾದಕರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಚಿನಾರ್‌ ಪೊಲೀಸ್‌-ಇಂಡಿಯನ್‌ ಆರ್ಮಿ ಎಕ್ಸ್‌ ಹ್ಯಾಂಡಲ್‌ ಪೋಸ್ಟ್‌ನಲ್ಲಿ ಕಾರ್ಯಾಚರಣೆ ಕುರಿತು ದೃಢಪಡಿಸಿದೆ.


Share with

Leave a Reply

Your email address will not be published. Required fields are marked *