ಹಿಮ್ಮುಖವಾಗಿ ಚಲಿಸಿದ ಲಾರಿ: ಓರ್ವ ಗಂಭೀರ

Share with

ಮಂಗಳೂರು: ಸುರತ್ಕಲ್ ನ ಪೆಟ್ರೋಲ್ ಬಂಕ್ ರಸ್ತೆ ಬಳಿ ನಿಲ್ಲಿಸಲಾಗಿದ್ದ ಲಾರಿ ಯುಟರ್ನ್ ನಲ್ಲಿ ಹಿಮ್ಮುಖವಾಗಿ ಚಲಿಸಿದರ ಪರಿಣಾಮವಾಗಿ ಓರ್ವ ಗಂಭೀರ ಗಾಯಗೊಂಡು, ನಾಲ್ಕು ಕಾರುಗಳು ಮತ್ತು ದ್ವಿಚಕ್ರ ವಾಹನ ಹಾಗೂ ಬಟ್ಟೆ ಮಳಿಗೆಯೊಂದು ಜಖಂಗೊಂಡಿರುವ ಘಟನೆ ನಡೆದಿದೆ.

ಸರಕು ಹೇರಿಕೊಂಡಿದ್ದ ಲಾರಿಯನ್ನು ಚಾಲಕ ಪೆಟ್ರೋಲ್ ಬಂಕ್ ರಸ್ತೆ ಬಳಿ ನಿಲ್ಲಿಸಿ ಹೊರಗೆ ತೆರಳಿದ್ದ ಎನ್ನಲಾಗಿದೆ.

ಲಾರಿ ಯುಟರ್ನ್ ನಲ್ಲಿ ಹಿಮ್ಮುಖವಾಗಿ ಚಲಿಸಿ ಮೂಡ ಮಾರುಕಟ್ಟೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿದ್ದ ಕಾರುಗಳಿಗೆ ಢಿಕ್ಕಿ ಹೊಡೆದಿದ್ದು, ಕಾರಿನ ಬಳಿ ನಿಂತಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಸುರತ್ಕಲ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *