ಪೆರ್ಲ: ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾ ಮಗುಚಿ ಚಾಲಕ ಪೆರ್ಲ ಬಳಿಯ ಪಡ್ರೆ ಬದಿಯಾರು ನಿವಾಸಿ ಬಿ.ಪ್ರವೀಣ (31) ಸಾವಿಗೀಡಾಗಿದ್ದಾರೆ.
ಉಕ್ಕಿನಡ್ಕ ಮೆಡಿಕಲ್ ಕಾಲೇಜು ಸಮೀಪ ನಾಯಿ ದಿಢೀರ್ ಅಡ್ಡ ಬಂದ ಪರಿಣಾಮ ರಿಕ್ಷಾ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತು. ಪರಿಣಾಮವಾಗಿ ಗಂಭೀರ ಗಾಯಗೊಂಡ ಪ್ರವೀಣ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಜೀವ ಉಳಿಸಲಾಗಲಿಲ್ಲ. ರಿಕ್ಷಾದಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.