ರೋಹಿತ್ ಶರ್ಮಾ ಸ್ಫೋಟಕ ಸೆಂಚುರಿ: 183 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮುಂಬೈ

Share with

ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಮುಂಬೈ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಕ್ಕಿಂ ತಂಡವು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಕ್ಕಿಂ ಪರ ವಿಕೆಟ್ ಕೀಪರ್ ಬ್ಯಾಟರ್ ಆಶಿಶ್ ಥಾಪಾ 79 ರನ್ಗಳ ಇನಿಂಗ್ಸ್ ಆಡಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಸಿಕ್ಕಿಂ ತಂಡ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿತು.

ರೋಹಿತ್ ಶರ್ಮಾ ಸ್ಫೋಟಕ ಶತಕ:
237 ರನ್ಗಳ ಸುಲಭ ಗುರಿ ಪಡೆದ ಮುಂಬೈ ಪರ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಹಿಟ್ಮ್ಯಾನ್ ಸಿಕ್ಕಿಂ  ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಕೇವಲ 62 ಎಸೆತಗಳಲ್ಲಿ ಶತಕ ಪೂರೈಸಿದರು.


Share with

Leave a Reply

Your email address will not be published. Required fields are marked *