ಬೆಂಗಳೂರಿನಲ್ಲಿ ರೌಡಿಶೀಟರ್ ಬಿಲ್ಲು ಶಿವು ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಿಲ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ.