
ಬೆಂಗಳೂರು: ಎರಡು ಸಾವಿರ ರೂ.ಗಳ ಕಂತೆ ಕಂತೆ ನೋಟುಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ಜು.25 ರಂದು ಬೆಂಗಳೂರಿನ ಕನಕಪುರದಲ್ಲಿ ನಡೆದಿದೆ. ರಿಸರ್ವ್ ಬ್ಯಾಂಕ್ 2000 ರೂ. ನೋಟುಗಳನ್ನು ಚಲಾವಣೆಯಿಂದ ವಾಪಸ್ ಪಡೆದಿದೆ. ಹಾಗಾಗಿ, ಸೆ.30ರ ತನಕ ನೋಟುಗಳನ್ನು ಬ್ಯಾಂಕಿನಲ್ಲಿ ಬದಲಿಸಿಕೊಳ್ಳಲು ಅವಕಾಶ ನೀಡಿದೆ.
ಆದರೆ ನೋಟು ಚಲಾವಣೆ ಮಾಡಲು ಸಾಧ್ಯವಿಲ್ಲವೆಂದರಿತ ದುಷ್ಕರ್ಮಿಗಳು 2000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು ಬೆಂಗಳೂರಿನ ಕನಕಪುರ ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ. ನೋಟು ಎಸೆದವರು ಯಾರು ಎಂಬುವುದು ತಿಳಿದುಬಂದಿಲ್ಲ.ಈ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ.