ಕಂಬಳಕ್ಕೆ 5 ಕೋಟಿ ರೂ ಅನುದಾನ: ಸಿಎಂ ಭರವಸೆ

Share with

ಮಂಗಳೂರು: ರಾಜ್ಯ ಮಾನ್ಯತೆ ಪಡೆದಿರುವ, ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆಯಾಗಿರುವ ಕಂಬಳದ ಅಭಿವೃದ್ಧಿ ಹಾಗೂ ಪ್ರೋತ್ಸಾಹಕ್ಕಾಗಿ ಮುಂದಿನ ಬಜೆಟ್‌ನಲ್ಲಿ 5 ಕೋ ರೂ. ವಿಶೇಷ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಭರವಸೆ ನೀಡಿದ್ದಾರೆ.

ಶುಕ್ರವಾರ ಕಂಬಳದ ಮಹಾ ಪೋಷಕ ಹಾಗೂ ಕಂಬಳ ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾ‌ರ್ ನೇತೃತ್ವದಲ್ಲಿ ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ರಾಜ್ಯದಲ್ಲಿ ನಡೆಯುವ 27 ಕಂಬಳಗಳ ಆಯೋಜನೆಗೆ 5 ಕೋಟಿ ರೂ. ವಿಶೇಷ ಅನುದಾನ ಒದಗಿಸುವಂತೆ ಹಾಗೂ ಈ ಕುರಿತು ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ನಿಯೋಗ ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್‌ಅವರು ಅನುದಾನ ನೀಡುವ ಭರವಸೆ ನೀಡಿದರು.


Share with

Leave a Reply

Your email address will not be published. Required fields are marked *