ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Share with

ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್​ ಪ್ರಾಂಜಲ್​ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಯೋಧ ಕ್ಯಾಪ್ಟನ್​ ಪ್ರಾಂಜಲ್​ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ನ.24ರಂದು ರಾತ್ರಿ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಪ್ರಾಂಜಲ್​ ಅವರ ಪಾರ್ಥೀವ ಶರೀರ ಆಗಮಿಸಿದ್ದು, ಈ ವೇಳೆ ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್​ ಅವರಿಗೆ ಅಂತಿಮ ಗೌರವ ನಮನ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು.

ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆದಿದೆ. ಈ ವೇಳೆ ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರ ರಕ್ಷಣೆ ನಿಂತಿದ್ದು, ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು ಎಂದು ಸ್ಮರಿಸಿದರು. ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ. ಇದೀಗ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *