

ಬೆಂಗಳೂರು : ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈಡ್ರಾಮಾಕ್ಕೆ ಕಾರಣವಾದವು. ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಸಿಟ್ಟು ಹೊರ ಹಾಕಿದರು.
ಇಂದು ವಿಧಾನಸಭೆಯ ಅಧಿವೇಶನದ ಕೊನೆಯ ದಿನ. ಹೀಗಾಗಿ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಅಶೋಕ್ ಮತ್ತು ಸುನಿಲ್ ಕುಮಾರ್ ಸರಕಾರವನ್ನು ತರಾಟೆಗೆ ತೆಗೆದುಕೊಂಡರು. ಸರಕಾರದ ಸಚಿವರೇ ತನ್ನ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ಆರೋಪಿಸಿದ್ದಾರೆ. ಆದರೆ ಸರಕಾರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿದ ಅವರು ಜಡ್ಜ್ಗಳ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ರಾಜಣ್ಣ ಹೇಳಿದ್ದಾರೆ. ಹೀಗಾಗಿ ಸರಕಾರ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.




