ಗ್ಯಾರಂಟಿ ಯೋಜನೆಗಳು ಸ್ಥಗಿತ ವದಂತಿ..?

Share with

ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಸ್ಥಗಿತಗೊಳಿಸಲಿದೆ ಎಂಬುದು ಶುದ್ಧ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

‘ಗ್ಯಾರಂಟಿ’ಗಳಿಗೆ ಹಣದ ಕೊರತೆಯಿಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಇರುತ್ತವೆ. ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಪಂಚ ಗ್ಯಾರಂಟಿಗಳನ್ನು ಮನೆ-ಮನೆಗೆ ತಲುಪಿಸಿದ್ದೇನೆ. ಆದರೆ, ಬಿಜೆಪಿಯವರು ನಿರಂತರವಾಗಿ ಸುಳ್ಳು ಹರಡುತ್ತಾ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.


Share with