ಬೆಂಗಳೂರು: ಉಸಿರಾಟದ ಸಮಸ್ಯೆ ಹಿನ್ನಲೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಾಲುಮರದ ತಿಮ್ಮಕ್ಕ ಅವರಿಗೆ ತೀವ್ರನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ತಿಮ್ಮಕ್ಕ ಅವರು ಬೇಲೂರಿನಲ್ಲಿ ವಾಸವಿದ್ದರು. ವಾತಾವರಣ ಬದಲಾವಣೆಯಿಂದಾಗಿ ಮೂರು ದಿನದಿಂದ ಸ್ವಲ್ಪ ಉಸಿರಾಟದ ಸಮಸ್ಯೆಯಾಗಿದ್ದು ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ವಿ ಆದರೂ ಕಡಿಮೆಯಾಗಲಿಲ್ಲ. ಉಸಿರಾಟದ ಸಮಸ್ಯೆ ಜಾಸ್ತಿ ಆಯ್ತು. ಆದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದೇವೆ ಎಂದು ಸಾಲುಮರದ ತಿಮ್ಮಕ್ಕ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ಅವರು ಹೇಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.