ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರು ಇತ್ತೀಚೆಗಷ್ಟೇ ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಅವರು ನಿಧನವಾಗಿದ್ದಾರೆ ಎನ್ನುವ ಸುಳ್ಳು ಸುದ್ದಿ ಹಬ್ಬಿಸಿದ್ದು, ಇದೀಗ ಈ ಬಗ್ಗೆ ಸ್ವತಃ ಸಾಕು ಮಗ ಉಮೇಶ್ ಅವರು “ಸಾಲುಮರದ ತಿಮ್ಮಕ್ಕ ಅವರು ಆರೋಗ್ಯವಾಗಿದ್ದಾರೆ” ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.
ಸಾಲುಮರದ ತಿಮ್ಮಕ್ಕ ಅವರು ನಿಧನವಾಗಿದ್ದಾರೆ ಅನ್ನುವ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಅವರು ಆರೋಗ್ಯವಾಗಿದ್ದು, ಇನ್ನೆರಡು ದಿನದಲ್ಲಿ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ. ದಯವಿಟ್ಟು ಸಾಮಾಜಿಕ ಜಾಲತಾಣದಲ್ಲಿ ಸುಮ್ಮನೆ ವದಂತಿ ಹಬ್ಬಿಸಬೇಡಿ ಎಂದು ತಿಮ್ಮಕ್ಕ ಅವರ ಸಾಕು ಪುತ್ರ ಉಮೇಶ್ ಅವರು ಮನವಿಯನ್ನು ಮಾಡಿದ್ದಾರೆ. ಅಲ್ಲದೆ ತಿಮ್ಮಕ್ಕ ತಿಂಡಿ ತಿನ್ನುವ ವಿಡಿಯೋವೊಂದನ್ನು ಉಮೇಶ್ ಅವರು ಹಂಚಿಕೊಂಡಿದ್ದಾರೆ.