ಮಂಡ್ಯ, ನವೆಂಬರ್ 18: ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಅಪಘಾತ ಸಂಭವಿಸಿದೆ.





