ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Share with

ಶಬರಿಮಲೆ ದೇವಸ್ಥಾನದ (Sabarimala Gold Plating Scam) ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಇದೀಗ ಎಸ್ಐಟಿ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ದೇವಾಲಯದಲ್ಲಿ ವೈಜ್ಞಾನಿಕ ಪರೀಕ್ಷೆ ನಡೆಸುತ್ತಿದೆ. ಗರ್ಭಗುಡಿಯ ದ್ವಾರಪಾಲಕ ಶಿಲ್ಪ ಮತ್ತು ಚಿನ್ನದಿಂದ ಆವೃತವಾದ ಮರದ ಬಾಗಿಲಿನ ರಚನೆಯಿಂದ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ವಿಡಿಯೋವೊಂದು ಎಎನ್ಐ ಹಂಚಿಕೊಂಡಿದೆ. ತನಿಖೆಯ ಭಾಗವಾಗಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಅವರನ್ನು ಈಗಾಗಲೇ ಎಸ್ಐಟಿ ವಶಪಡೆದುಕೊಂಡಿದ್ದು ತನಿಖೆಯನ್ನು ನಡೆಸುತ್ತಿದೆ. ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಗೆಯಲ್ಲಿದ್ದ ಬರೋಬ್ಬರಿ 4.54 ಕೆಜಿ ಲೇಪನ ಕಾಣೆಯಾಗಿದೆ.


Share with

Leave a Reply

Your email address will not be published. Required fields are marked *