ಉಳ್ಳಾಲದ ಸೀಗೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪರದ ಸಮೀರ್ ಬಂಧಿತ ಆರೋಪಿಯಾಗಿದ್ದು, ಆರೋಪಿಗಳು ಉಳ್ಳಾಲ ಸೀಗೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ತೂಕದ ಎಂ.ಡಿ.ಎಂ.ಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ 14 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು ಒಂದು ಲಕ್ಷ ಹದಿನೆಂಟುವರೆ ಸಾವಿರ ಮೌಲ್ಯದ ಸೊತ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಪಿ.ಎಸ್.ಐ ಶೀತಲ್ ಹಾಗೂ ಸಿಬ್ಬಂದಿಗಳಾದ ಅಕ್ಟರ್, ಅಶೋಕ್, ಮಂಜು, ವೆಂಕಟೇಶ್ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.