
ನವದೆಹಲಿ, ಮೇ 9: ಭಾರತ ಮತ್ತು ಪಾಕಿಸ್ತಾನ
ನಡುವಣ ಯುದ್ಧ ಭೀತಿಯಿಂದಾಗಿ ಐಪಿಎಲ್ (IPL) ಟೂರ್ನಿಯನ್ನು ಬಿಸಿಸಿಐ ಸ್ಥಗಿತಗೊಳಿಸಿದ ಬೆನ್ನಲ್ಲೇ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಮೌನ ಮುರಿದಿದ್ದಾರೆ. ಭಾರತೀಯ ಸೇನೆ ಪರ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಸಂದೇಶ ಪ್ರಕಟಿಸಿದ ಅವರು, ನಾವು ಒಗ್ಗಟ್ಟಾಗಿರುತ್ತೇವೆ.
ಭಾರತೀಯ ಸೇನೆಗೆ ಸೆಲ್ಯೂಟ್ ಎಂದಿದ್ದಾರೆ. ಇದರೊಂದಿಗೆ, ಐಪಿಎಲ್ ಸ್ಥಗಿತದ ನಂತರ ಮೊದಲ ಬಾರಿಗೆ ಕೊಹ್ಲಿ ಪ್ರತಿಕ್ರಿಯೆ ನೀಡಿದಂತಾಗಿದೆ.

“ಈ ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುತ್ತಿರುವುದಕ್ಕಾಗಿ ಭಾರತೀಯ ಸೇನೆಗೆ ಸೆಲ್ಯೂಟ್. ನಾವು ನಮ್ಮ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮ ವೀರ ಯೋಧರ ಅಚಲ ಧೈರ್ಯ, ಅವರು ಮತ್ತು ಅವರ ಕುಟುಂಬದವರು ನಮ್ಮ ದೇಶಕ್ಕಾಗಿ ಮಾಡುವ ತ್ಯಾಗಗಳಿಗೆ ನಾವು ಸದಾ ಕೃತಜ್ಞರಾಗಿರುತ್ತೇವೆ” ಎಂದು ವಿರಾಟ್ ಕೊಹ್ಲಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಆ ಮೂಲಕ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.




