ಸೌದಿ ಅರೇಬಿಯಾದಿಂದ 56,000 ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಲಾಗಿದೆ. ಯುಎಇ ಹೆಚ್ಚಿನ ಪಾಕಿಸ್ತಾನಿ ನಾಗರಿಕರ ಮೇಲೆ ವೀಸಾ ನಿರ್ಬಂಧಗಳನ್ನು ವಿಧಿಸಿದೆ. ಜೊತೆಗೆ ಕೆಲವರು ಯುಎಇ ಬಂದ ನಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ.

ವಿದೇಶಗಳಲ್ಲಿ ಸಂಘಟಿತ ಭಿಕ್ಷಾಟನೆ & ಅಪರಾಧ ಚಟುವಟಿಕೆಗಳ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪಾಕಿಸ್ತಾನಿ ಪ್ರಜೆಗಳ ಮೇಲೆ ತಪಾಸಣೆಯನ್ನು ಬಿಗಿಗೊಳಿಸಿವೆ.




