ಉಡುಪಿ: ಭಾರತೀಯ ಸ್ಟೇಟ್ ಬ್ಯಾಂಕ್‌ನ ಮಲ್ಪೆ ಶಾಖೆಯ ವ್ಯವಸ್ಥಾಪಕ ಹಾಗೂ ಇತರರು ಸೇರಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ನ ಲಕ್ಷಾಂತರ ರೂಪಾಯಿ ದುರುಪಯೋಗ ಮಾಡಿ ವಂಚಿಸಿರುವ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೌಸಿಂಗ್ ಫೈನಾನ್ಸ್ ಕಂಪನಿಯೊಂದರಿಂದ ಬಂದ ಇ-ಮೇಲ್ ಸಂದೇಶ ಆಧರಿಸಿ ನಾಲ್ವರ ಖಾತೆಗಳಿಗೆ ₹73 ಲಕ್ಷ ಹಣ ವರ್ಗಾವಣೆ ಮಾಡಿರುವ ಕುರಿತು ಆ.25ರಂದು ಎಸ್‌ಬಿಐ ಮುಂಬೈ ಶಾಖೆಯು ಮಲ್ಪೆ ಶಾಖೆಯ ವ್ಯವಸ್ಥಾಪಕರಲ್ಲಿ ವಿವರ ಕೇಳಿತ್ತು.
ಈ ಕುರಿತು ಪರಿಶೀಲಿಸಿದಾಗ, ಮಲ್ಪೆ ಶಾಖೆಯಲ್ಲಿ ವ್ಯವಸ್ಥಾಪಕರಾಗಿದ್ದ ಮೀರಾ ಪಲ್ಲವಿ ಟಿ.ಎಚ್. ಅವರು ಹಾಗೂ ಹಣ ಪಡೆದ ಖಾತೆದಾರರು ಸೇರಿ ನಕಲಿ ದಾಖಲೆ ಸೃಷ್ಟಿಸಿ ಸ್ವಂತಕ್ಕೆ ಹಣ ಬಳಸಿ ಬ್ಯಾಂಕ್‌ಗೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.




