ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಸೂಕ್ತವಾದ ರೀತಿಯಲ್ಲಿ ಎಚ್ಚರಿಕೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಶೀಲಿಸಿಕೊಂಡು ಶಾಲೆ, ಕಾಲೇಜು ನಡೆಸಲು ಜಿಲ್ಲಾಧಿಕಾರಿ ಸೂಚಿಸಿರುತ್ತಾರೆ.