ನೇತ್ರಾವತಿ ನದಿಯಲ್ಲಿ ಮುಳುಗಿ ಶಾಲಾ ಬಾಲಕ ಸಾವು..!

Share with

ಬಂಟ್ವಾಳ: ಶಾಲಾ ಬಾಲಕನೋರ್ವ ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ವೇಳೆ ನಾವೂರ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.

ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದನೆ ಎನ್ನಲಾಗಿದೆ. ಕೂಡಲೇ ಸ್ಥಳೀಯ ಮುಳುಗು ತಜ್ಞರು ಬಾಲಕನನ್ನು ಮೇಲಕ್ಕೆ ಎತ್ತಿ ತಂದರೂ ಅದಾಗಲೇ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗ್ರಾಮಾಂತರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *