ಶಾಲಾ ಬಸ್‌ ಪಲ್ಟಿ: ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Share with

ರಸ್ತೆಯಲ್ಲಿ ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮಟ್ಟಿ ಬಳಿ ನಡೆದಿದೆ.

ಮರಡಿಮಠದ ಜೈ ಹನುಮಾನ್ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಈ ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಸ್ಟೇರಿಂಗ್ ಲಾಕ್ ಆಗಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Share with