ನಾಳೆ ದ.ಕ. ಮತ್ತು ಕಾಸರಗೋಡು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

Share with

ಮಂಗಳೂರು :ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ 3-12-2024 ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಸರ್ಕಾರಿ ಅನುದಾನಿತ ಮತ್ತು ಪ್ರಾಥಮಿಕ ಪ್ರೌಢಶಾಲೆ ಪದವಿ ಪೂರ್ವ ಕಾಲೇಜು ಪಿಯು ಸಿ ವರೆಗೆ ರಜೆಯನ್ನು ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ .

ಕಾಸರಗೋಡು ಜಿಲ್ಲೆಯ ಹಲವು ಪ್ರದೇಶದ ತಗ್ಗು ಪ್ರದೇಶಗಳು ಮುಳುಗಿದ್ದು ಕೃತಕ ನೆರೆ ಸಂಭವಿಸಿದೆ. ನಾಳೆ ಅಂದ್ರೆ ಡಿಸೆಂಬ‌ರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರ, ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ. ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ.


Share with

Leave a Reply

Your email address will not be published. Required fields are marked *