ದ್ವಿತೀಯ ಪಿಯು ಫಲಿತಾಂಶ : ಬಳ್ಳಾರಿಯ ಸಂಜನಾ ಭಾಯಿ ರಾಜ್ಯಕ್ಕೆ ಪ್ರಥಮ

Share with

2024-25ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ವರ್ಷವೂ ರಾಜ್ಯದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಶೇಕಡಾ 68.20ರಷ್ಟು ಬಾಲಕರು ಉತ್ತೀರ್ಣರಾಗಿದ್ರೆ, ಶೇಕಡಾ 77.88ರಷ್ಟು ಬಾಲಕಿಯರು ಪಾಸ್ ಆಗಿದ್ದಾರೆ. ಒಟ್ಟು 73.45 ರಷ್ಟು ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ಈ ಬಾರಿ ವಿದ್ಯಾರ್ಥಿನಿ ಸಂಜನಾ ಭಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಜನಾ ಭಾಯಿ 600ಕ್ಕೆ ‌597 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಮಾರ್ಚ್1 ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ಪಿಯು ಪರೀಕ್ಷೆ ನಡೆದಿತ್ತು. ಒಟ್ಟು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.


Share with

Leave a Reply

Your email address will not be published. Required fields are marked *