ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟವಾಗಲ್ಲ ಎಂದು ಎಕ್ಸಾಂ ಬೋರ್ಡ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಮೊದಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಏ.7ರಂದು ದ್ವಿತೀಯ PUC ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದ್ದರು.

ಇದೀಗ ಅಧಿಕಾರಿಗಳು ನಾಳೆ ಫಲಿತಾಂಶ ಪ್ರಕಟಿಸಲ್ಲ. ಇನ್ನೂ ಫಲಿತಾಂಶ ಪ್ರಕಟಿಸುವ ದಿನಾಂಕ ಕೂಡ ನಿಗದಿಪಡಿಸಿಲ್ಲ ಎಂದು ತಿಳಿಸಿದ್ದಾರೆ. ಉಪಚುನಾವಣೆಯ ಹಿನ್ನಲೆ ನೀತಿ ಸಂಹಿತೆ ಜಾರಿ ಇದೆ. ಹೀಗಾಗಿ ಫಲಿತಾಂಶ ಪ್ರಕಟಿಸಲು ಎಕ್ಸಾಂ ಬೋರ್ಡ್, ಚುನಾವಣಾ ಆಯೋಗದ ಅನುಮತಿಗಾಗಿ ಕಾಯುತ್ತಿದೆ.




