ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೆ.12, 13ರಂದು ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಸೆ.12 ಹಾಗೂ 13ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳಭಾಗ ಕರ್ನಾಟಕದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.




