ಪಡುಬಿದ್ರಿ: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ ದಸರಾ ಮಹೋತ್ಸವ ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದಿದ್ದು, ಈ ವರ್ಷ 4ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದಲ್ಲಿ ‘ ಉಡುಪಿ ಉಚ್ಚಿಲ ದಸರಾ-2025 ‘ ಸೆ.22ರಿಂದ ಅ.2ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ಸಭಾಂಗಣದಲ್ಲಿ ನಡೆಯಲಿದೆ.

ಶ್ರೀ ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಡಾ.ಜಿ.ಶಂಕರ್ ಸೆ.17ರಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಆಕರ್ಷಕವಾಗಿ ನಿರ್ಮಿಸಲಾಗುವ ಮಂಟಪದಲ್ಲಿ ನವದುರ್ಗೆಯರು ಹಾಗೂ ಶ್ರೀ ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಿ 11 ದಿನಗಳ ಕಾಲ ಶಾಸ್ತ್ರೋಕ್ತವಾಗಿ ಪೂಜಿಸಲಾಗುವುದು ಎಂದರು.
21ರಂದು ವಿದ್ಯುದ್ದೀಪಾಲಂಕಾರ ಉದ್ಘಾಟನೆ :
ಸೆ.21ರಂದು ಸಂಜೆ 6.30ಕ್ಕೆ ಪಡುಬಿದ್ರಿಯಿಂದ ಕಾಪು ಸಮುದ್ರ ತೀರದವರೆಗೆ ಮಾಡಲಾಗಿರುವ ವಿದ್ಯುದ್ದೀಪಾಲಂಕಾರದ ಉದ್ಘಾಟನೆ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.




