ಮಂಗಳೂರು: ಪ್ರವಾಸೋದ್ಯಮ ಇಲಾಖೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026’ನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ (ಜ.10) ನಗರದ ಖಾಸಗಿ ಹೊಟೇಲ್ ನಲ್ಲಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕರಾವಳಿ ಜ್ಞಾನ ಸಂಪತ್ತಿನ ಪರ್ವತ, ದೈವ ದೇವರ ಶಕ್ತಿಕೇಂದ್ರ, ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ, ವಿಶೇಷ್ಟ ಕಲೆ-ಸಂಸ್ಕೃತಿಗಳ ತವರೂರು ಆದರೂ ಪ್ರವಾಸೋದ್ಯಮದಲ್ಲಿ ಹಿಂದೆ ಉಳಿದಿದೆ. ಹಾಗಾಗಿ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಯ ಅಗತ್ಯವಿದೆ. ಈಗಾಗಲೇ ರಾಜ್ಯ ಪ್ರವಾಸೋದ್ಯಮ ನೀತಿಯನ್ನು ಸಿದ್ಧಪಡಿಸಲಾಗಿದ್ದು, ಕರಾವಳಿಯ ಕುರಿತ ಚರ್ಚಸಿದ ಬಳಿಕ ಅದನ್ನು ಅಂತಿಮ ಪಡಿಸಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಕರಾವಳಿಯಲ್ಲಿ ಮೊದಲ ಹಂತದ ಸಭೆ ಆಯೋಜಿಸಲಾಗಿದೆ ಎಂದರು.
ವಿಧಾನಸಭೆ ಸ್ಪೀಕರ್ ಯು ಟಿ ಖಾದರ್, ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಳರ್, ಮಂಕಾಳ ವೈದ್ಯ, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಸುನೀಲ್ ಕುಮಾರ್, ಡಾ| ವೈ. ಭರತ್ ಶೆಟ್ಟಿ, ಯಶ್ ಪಾಲ್ ಸುವರ್ಣ, ರಾಜೇಶ್ ನಾಯ್ಕ, ಕಿರಣ್ ಕೊಡ್ಲಿ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕೊಡ್ಲಿ, ರಾಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಕಿಶೋರ್ ಕುಮಾರ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು, ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪ್ರವಾಸೋದ್ಯಮ ಪಾಲುದಾರರು, ಉದ್ದಿಮೆದಾರರು, ಭಾಗವಹಿಸಿದ್ದರು.




