ಬಂಟ್ವಾಳ: ತಾಯಿ ಮಗಳಿಗೆ ಚಾಕು ತೋರಿಸಿ ದರೋಡೆ; ಆರೋಪಿಗಳ ಬಂಧನ

Share with

ಬಂಟ್ವಾಳ: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಮುಸುಕುಧಾರಿಗಳ ತಂಡ ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ಪ್ರಕರಣದ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ಪ್ರಕರಣದ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್‌ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್‌ ಎಲ್.ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮ ಪ್ರವೀಣ್‌ (36), ಸುಧೀರ್‌ (29) ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದ ಮೂಲತಃ ಬಂಟ್ವಾಳ ತಾಲೂಕಿನ, ಇರಾ ಗ್ರಾಮದವನಾದ ಪ್ರಸ್ತುತ ಗೌರಿ ಕಾಲುವೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವಾಸವಾಗಿರುವ ಮಹಮ್ಮದ್‌ ಹನೀಫ್ (49) ಎಂದು ಗುರುತಿಸಲಾಗಿದೆ.

ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಆರೋಪಿಗಳು

ಇನ್ನು ಬಂಧಿತರಿಂದ ದರೋಡೆಗೈದ 3.15 ಲಕ್ಷ ಮೌಲ್ಯದ 54 ಗ್ರಾಂ ಚಿನ್ನಾಭರಣ ಹಾಗೂ ರೂ.8 ಲಕ್ಷ ಮೌಲ್ಯದ ಇನ್ನೋವಾ ಕಾರು ಹಾಗು ಅಂದಾಜು ರೂ.2 ಲಕ್ಷ ಮೌಲ್ಯದ ಟಾಟಾ ಇಂಡಿಕಾ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *