ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ನಿವಾಸಿ ನರೇಶ್ (41) ಬಂಧಿತ. ಈತ ವೇಣೂರು ವ್ಯಾಪ್ತಿಯಲ್ಲಿ ಕೂಲಿ ಕೆಲಸಕ್ಕೆ ಆಗಮಿಸಿದ್ದ ಎನ್ನಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.




