ಹಿಂದೂ ಸಮಾಜೋತ್ಸವದ ಸಮಾರಂಭದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ತಡೆ

Share with

ಹಿಂದೂ ಸಮಾಜೋತ್ಸವದ ಸಮಾರಂಭದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ಉಡುಪಿ ಜಿಲ್ಲಾ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.

ಉಡುಪಿ: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಇಂದು ಸಂಜೆ ಎಂಜಿಎಂ ಕ್ರೀಡಾಂಗಣದಲ್ಲಿ ಶೌರ್ಯ ಜಾಗರಣಾ ಯಾತ್ರೆಯ ಅಂಗವಾಗಿ ಹಿಂದೂ ಸಮಾಜೋತ್ಸವದ ಸಮಾರಂಭದಲ್ಲಿ ಭಾಗವಹಿಸದಂತೆ ಉಡುಪಿ ಜಿಲ್ಲಾ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.

ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಸ್ವಯಂಪ್ರೇರಿತ ಪ್ರಕರಣವನ್ನು ಶರಣ್ ವಿರುದ್ಧ ದಾಖಲಿಸಿದ್ದರು.

ಈಗಾಗಲೇ ರಥಯಾತ್ರೆಯು ಮಂಗಳೂರಿನಿಂದ ಉಡುಪಿ ಜಿಲ್ಲೆಗೆ ಪ್ರವೇಶಿಸಿದ್ದು, ಸಂಜೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದೆ. ಇದರಲ್ಲಿ ಭಾಗವಹಿಸಿದರೆ ಅವರನ್ನು ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಬಂಧಿಸುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಅವರು ಉಡುಪಿ ಪೊಲೀಸರ ಆದೇಶದ ಬಗ್ಗೆ ತಿಳಿದು ಹೆಜಮಾಡಿಯಿಂದ ವಾಪಸ್ಸು ಆಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.


Share with

Leave a Reply

Your email address will not be published. Required fields are marked *