ಉಡುಪಿ: ಪಾರಂಪಳ್ಳಿ ಗ್ರಾಮದ ನಿವಾಸಿ ಶರತ್ ರಾವ್ ನಾಪತ್ತೆ

Share with

ಉಡುಪಿ: ಬ್ರಹ್ಮಾವರ ತಾಲೂಕು ಪಾರಂಪಳ್ಳಿ ಗ್ರಾಮದ ನಿವಾಸಿ ಶರತ್ ರಾವ್(39) ವ್ಯಕ್ತಿಯು ಜ.18ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಪಾರಂಪಳ್ಳಿ ಗ್ರಾಮದ ನಿವಾಸಿ ಶರತ್ ರಾವ್

5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಬ್ರಹ್ಮಾವರ ಪೋಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966, ಮೊ.ನಂ:9480805432 ಹಾಗೂ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820-2564155, ಮೊ.ನಂ: 9480805454 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Share with

Leave a Reply

Your email address will not be published. Required fields are marked *