
ಮಂಗಳೂರು : ವಿಶ್ವ ಹಿಂದು ಪರಿಷತ್ನ 60ನೇ ವರ್ಷಾಚರಣೆ ಪ್ರಯುಕ್ತ ದೇಶಾದ್ಯಂತ ಯುವ ಸಂಘಟನೆಯಾದ ಬಜರಂಗದಳ ನೇತೃತ್ವದಲ್ಲಿ ಸೆ.25 ರಂದು ಚಿತ್ರದುರ್ಗದಲ್ಲಿ ಆರಂಭವಾದ ಶೌರ್ಯ ರಥ ಯಾತ್ರೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸಂಚರಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ನಡೆಸಿ ಇದೀಗ ಕರಾವಳಿ ಜಿಲ್ಲೆ ಪ್ರವೇಶಿಸಿದ್ದು ಇದೀಗ ಮಂಗಳೂರು ನಗರ ಪ್ರವೇಶಿಸಿದೆ.
ನಗರದ ಹೊರವಲಯದ ಅಡ್ಯಾರಿನಲ್ಲಿ ರಥಯಾತ್ರೆಗೆ ಭವ್ಯ ಸ್ವಾಗತ ಕೋರಲಾಯಿತು. ಅಪರಾಹ್ನ ನಗರದಲ್ಲಿ ರಥಯಾತ್ರೆ ನಡೆಯಲಿದ್ದು ಇದಕ್ಕಾಗಿ ಭರ್ಜರಿ ತಯಾರಿ ನಡೆಸಲಾಗಿದೆ. ನಗರ ಸಂಪೂರ್ಣ ಕೇಸರಿಮಯವಾಗಿದ್ದು ಮುಂಜಾಗೃತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.
ಸಂಜೆ 4.30ಕ್ಕೆ ನಗರದ ಕದ್ರಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಚಿಂತಕ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣ ಮಾಡಲಿದ್ದು ಸಾಧು ಸಂತರು, ವಿಹೆಚ್‌ಪಿ, ಬಜರಂಗದಳದ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.