ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಶಿವಕುಮಾರ್ ಅವರನ್ನು ಹಾಗೂ ನಗರ ಪೊಲೀಸ್ ಠಾಣೆಗೆ ಅನಂತ ಪದ್ಮನಾಭ ಅವರನ್ನು ಪೋಲೀಸ್ ಇನ್ಸ್ ಪೆಕ್ಟರ್ ಆಗಿ ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿದ್ದ ಶಿವಕುಮಾರ್ ಅವರನ್ನು ಹಲವು ತಿಂಗಳಿನಿಂದ ಖಾಲಿಯಾಗಿದ್ದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಪೋಲಿಸ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆಯನ್ನು ನೀಡಲಾಗಿದೆ.
ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಟಿ.ಡಿ.ನಾಗರಾಜ್ ಅವರು ಕಾರ್ಕಳಕ್ಕೆ ವರ್ಗಾವಣೆಗೊಂಡ ಬಳಿಕ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಹುದ್ದೆ ಖಾಲಿಯಾಗಿತ್ತು.
ಬಂಟ್ವಾಳ ನಗರ ಪೋಲೀಸ್ ಠಾಣೆಯ ಪೋಲಿಸ್ ಇನ್ಸ್ ಪೆಕ್ಟರ್ ಆಗಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಆಗಿದ್ದ ಆನಂತಪದ್ಮನಾಭ ಅವರಿಗೆ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಿದೆ. ಇವರು ಈ ಹಿಂದೆ ಕದ್ರಿ ಪೋಲಿಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.