ಉಡುಪಿ: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಆರೋಪ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕಾಂಗ್ರೆಸ್‌ನ ಮೆಂಟಾಲಿಟಿ ಪಾಕಿಸ್ತಾನದ ಪರ ಇದೆ ಎಂಬುದು ಇದರಿಂದ ಗೊತ್ತಾಗುತ್ತದೆ. ಸಿದ್ದರಾಮಯ್ಯನವರಿಗೆ ಸಂವಿಧಾನದ ಬಗ್ಗೆ ನಂಬಿಕೆ ಇದ್ದರೆ ತಕ್ಷಣ ಪಾಕಿಸ್ತಾನ ಜಿಂದಾಬಾದ್ ಅಂದವರನ್ನು ಅರೆಸ್ಟ್ ಮಾಡಿ ಎಂದು ಒತ್ತಾಯ ಮಾಡಿದರು.
ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ, ಇದನ್ನು ಪ್ರಶ್ನೆ ಮಾಡಲು ಹೋದ ಪತ್ರಕರ್ತರಿಗೂ ನಾಸೀರ್ ಹುಸೇನ್ ಅವಾಜ್ ಹಾಕಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.